ಮೈಸೂರು : ಮುಸ್ಲಿಮರು ಬಿಜೆಪಿಗೆ ಮತ ಹಾಕಲ್ಲ ಎಂದು ಮುಸ್ಲಿಮರ ಮತಗಳನ್ನ ಡಿಲೀಟ್ ಮಾಡಿಸುತ್ತಿದ್ದಾರೆ. ಎಸ್‌ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ನಗರಾಭಿವೃದ್ದಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಾತ್ಮಾ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಶುಕ್ರವಾರ ಗಾಂಧಿ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು. ಶಾಸಕರಾದ ಕೆ.ಹರೀಶ್ ಗೌಡ, ಶ್ರೀವತ್ಸ ಜೊತೆಯಲ್ಲಿದ್ದರು. ಬಳಿಕ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಚುನಾವಣಾ ಆಯೋಗ ವ್ಯವಸ್ಥಿತವಾಗಿ ಸಂಘಟಿತ ಅಪರಾಧ ಮಾಡುತ್ತಿದೆ. ಬಿಜೆಪಿಯವರು ಈ ಅಪರಾಧದಲ್ಲಿ ಪಾಲುದಾರರು. ಬಿಜೆಪಿ ಜೊತೆ ಚುನಾವಣಾ ಆಯೋಗ ಶಾಮೀಲಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor