×
Ad

ಮೈಸೂರು: ಯುವ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ, ಡಿಸಿಎಂ

Update: 2025-09-25 00:10 IST

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಯುವ ದಸರಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿದರು.

ನಗರದ ಹೊರವಲಯದ ನಂಜನಗೂಡು ರಿಂಗ್ ರಸ್ತೆಯ ಉತ್ತನಹಳ್ಳಿ ಬಳಿ ನಡೆಯುತ್ತಿರುವ ಯುವ ದಸರಾ ಕಾರ್ಯಕ್ರಮಕ್ಕೆ ಸಚಿವ ಸಂಪುಟದ ಹಲವು ಸಹದ್ಯೋಗಿಗಳೊಂದಿಗೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿ ಯುವ ಸಮೂಹವನ್ನು ಕಂಡು ಸಂತಸ ಪಟ್ಟರು.

ಯುವ ದಸರಾ ಉಪ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳನ್ನು ಸನ್ಮಾನಿಸಿದರು.

ಇದೇ ವೇಳೆ ಖ್ಯಾತ ಗಾಯಕ ಪ್ರೀತಮ್ ಮತ್ತು ತಂಡದ ಗಾನ ಸುಧೆಯನ್ನು ಸ್ವಲ್ಪ ಸಮಯ ನೋಡಿದರು.

ಸಚಿವರುಗಳಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾಜ್೯, ಭೈರತಿ ಸುರೇಶ್, ಸಂಸದ ಸುನೀಲ್ ಬೋಸ್, ವಿಧಾನಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಡಾ.ಕೆ.ಶಿವಕುಮಾರ್ ಉಪಸ್ಥಿತರಿದ್ದರು.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News