×
Ad

ಸಿದ್ದರಾಮಯ್ಯ ಸಿಎಂ ಕುರ್ಚಿಯಲ್ಲಿ ಭದ್ರವಾಗಿದ್ದಾರೆ: ಸಚಿವ ಝಮೀರ್ ಅಹ್ಮದ್ ಖಾನ್

Update: 2025-12-24 23:38 IST

ಮೈಸೂರು: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಹೈಕಮಾಂಡ್ ಮಾತ್ರ ಆ ತೀರ್ಮಾನ ಮಾಡಬಹುದು ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದರು.

ನಗರದಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಝಮೀರ್ ಅಹ್ಮದ್ ಖಾನ್, 2028ರವರೆಗೂ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಸಿದ್ದರಾಮಯ್ಯನವರನ್ನು ಕೆಳೆಗಿಳಿಸಲು ಯಾರ ಕೈಯಲ್ಲೂ ಸಾಧ್ಯವಿಲ್ಲ. ಆದರೆ ಹೈಕಮಾಂಡ್ ಮಾತ್ರ ಆ ತೀರ್ಮಾನ ಮಾಡಬಹುದು. ಹೈಕಮಾಂಡ್ ಬಿಟ್ಟು ಯಾರಿಂದಲೂ ಕೆಳಗಿಳಿಸಲು ಸಾಧ್ಯವಿಲ್ಲ ಎಂದರು.

ಸಿದ್ದರಾಮಯ್ಯ ಸಿಎಂ ಕುರ್ಚಿಯಲ್ಲಿ ಕುಳಿತಿದ್ದಾರೆ. ಸಿದ್ದರಾಮಯ್ಯ ಸಿಎಂ ಕುರ್ಚಿಯಲ್ಲಿ ಭದ್ರವಾಗಿದ್ದಾರೆ. ಹೈಕಮಾಂಡ್ ತೀರ್ಮಾನ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ . ಅಧಿಕಾರ ಹಂಚಿಕೆ ಒಪ್ಪಂದ ನನಗೆ ಗೊತ್ತಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News