×
Ad

ಬಿಹಾರ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ, ಲಾಠಿಚಾರ್ಜ್ ಗೆ ಓರ್ವ ಬಲಿ

Update: 2023-07-13 15:05 IST

ಸಾಂದರ್ಭಿಕ ಚಿತ್ರ, ಫೋಟೊ ANI

ಪಾಟ್ನಾ: ರಾಜ್ಯದಲ್ಲಿ ಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ ಬಿಹಾರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪಾಟ್ನಾ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದ ಒಬ್ಬ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ವಿವರಗಳ ಪ್ರಕಾರ, ಮೃತ ಬಿಜೆಪಿ ಮುಖಂಡನನ್ನು ವಿಜಯ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದ್ದು, ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ನಗರದ ದಕ್ಬಂಗ್ಲಾ ಚೌರಾಹಾದಲ್ಲಿ ಸಾವನ್ನಪ್ಪಿದ್ದಾರೆ.

ಸಿಂಗ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು

ಈ ಮಾಹಿತಿಯನ್ನು ರಾಜ್ಯಸಭಾ ಸಂಸದ ಸುಶೀಲ್ ಮೋದಿ ದೃಢಪಡಿಸಿದ್ದು, ಟ್ವಿಟರ್ ನಲ್ಲಿ ಬಿಜೆಪಿ ನಾಯಕ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

‘ವಿಧಾನಸಭಾ ಮಾರ್ಚ್’ ನಡೆಸುತ್ತಿದ್ದ ವೇಳೆ ಬಿಜೆಪಿ ಮುಖಂಡರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ.

ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಭದ್ರತಾ ಸಿಬ್ಬಂದಿ ಜಲಫಿರಂಗಿ ಮತ್ತು ಅಶ್ರುವಾಯು ಪ್ರಯೋಗಿಸಿದರು.

ಘಟನೆಯ ನಂತರ ಟ್ವೀಟಿಸಿದ ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ  "ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ರಾಜ್ಯ ಸರಕಾರದ ವೈಫಲ್ಯ ಮತ್ತು ಅದಕ್ಷತೆಯ ಪರಿಣಾಮವಾಗಿದೆ" ಎಂದು ಹೇಳಿದ್ದಾರೆ.

"ಭ್ರಷ್ಟಾಚಾರದ ಕೋಟೆಯನ್ನು ರಕ್ಷಿಸುವ ಸಲುವಾಗಿ ಮಹಾಘಟಬಂಧನ್ (ಮಹಾಮೈತ್ರಿಕೂಟ) ಸರಕಾರವು ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಿದೆ. ಬಿಹಾರದ ಮುಖ್ಯಮಂತ್ರಿ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ರಕ್ಷಿಸಲು ಸ್ವಂತ ನೈತಿಕತೆಯನ್ನು ಮರೆತಿದ್ದಾರೆ" ಎಂದು ನಡ್ಡಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News