×
Ad

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಮಸೂದೆಯ ಪ್ರತಿ ಹರಿದು ಅಮಿತ್ ಶಾ ಮೇಲೆ ಎಸೆದ ವಿಪಕ್ಷಗಳ ಸಂಸದರು

Update: 2025-08-20 15:09 IST

Photo credit: X/ANI

ಹೊಸದಿಲ್ಲಿ : ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ ಪದಚ್ಯುತಿಗೊಳಿಸಲು ಅನುವು ಮಾಡಿಕೊಡುವ ಮಸೂದೆ ಸೇರಿದಂತೆ ಮೂರು ವಿವಾದಾತ್ಮಕ ಮಸೂದೆಗಳನ್ನು ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಬುಧವಾರ ಮಂಡಿಸಿದರು.

ಸದನದಲ್ಲಿ ವಿಪಕ್ಷಗಳ ಸಂಸದರ ಭಾರೀ ಗದ್ದಲ ಮತ್ತು ಘೋಷಣೆಗಳ ನಡುವೆ ಅಮಿತ್ ಶಾ ಮೂರು ಮಸೂದೆಗಳನ್ನು ಮಂಡಿಸಿದರು.

ಸಂವಿಧಾನದ (130ನೇ ತಿದ್ದುಪಡಿ) ಮಸೂದೆ- 2025 ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ (ತಿದ್ದುಪಡಿ) ಮಸೂದೆ- 2025, ಕೇಂದ್ರಾಡಳಿತ ಪ್ರದೇಶಗಳ ಸರಕಾರ (ತಿದ್ದುಪಡಿ) ಮಸೂದೆಯನ್ನು ಅಮಿತ್ ಶಾ ಸದನದಲ್ಲಿ ಮಂಡಿಸಿದರು.

ಗೃಹ ಸಚಿವ ಅಮಿತ್‌ ಶಾ ಮಸೂದೆಗಳನ್ನು ಮಂಡಿಸುತ್ತಿದ್ದಂತೆ ವಿರೋಧ ಪಕ್ಷಗಳ ಸಂಸದರು ಮಸೂದೆಯ ಪ್ರತಿಗಳನ್ನು ಹರಿದು ಅಮಿತ್ ಶಾ ಅವರ ಮೇಲೆ ಎಸೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News