ಸೂರತ್ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ: ಓರ್ವ ಮೃತ್ಯು, ಹಲವರಿಗೆ ಗಾಯ
Update: 2023-11-11 16:13 IST
Screengrab:X/@madhuriadnal
ಸೂರತ್: ಶನಿವಾರ ಗುಜರಾತ್ ನ ಸೂರತ್ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮೃತಪಟ್ಟು, ಹಲವರು ಗಾಯಾಳುಗಳಾಗಿರುವ ಘಟನೆ ನಡೆದಿದೆ ಎಂದು indiatoday.in ವರದಿ ಮಾಡಿದೆ.
ದೀಪಾವಳಿಗಾಗಿ ವಿವಿಧ ರಾಜ್ಯಗಳಲ್ಲಿನ ತಮ್ಮ ಸ್ವಂತ ಊರುಗಳಿಗೆ ತೆರಳಲು ಬಂದಿದ್ದ ಜನರು, ರೈಲ್ವೆ ನಿಲ್ದಾಣದಲ್ಲಿ ಕಿಕ್ಕಿರಿದು ನೆರೆದಿದ್ದರು.
ರೈಲನ್ನು ಹತ್ತುವಾಗ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟು, ಮತ್ತೆ ಕೆಲವರು ಗಾಯಗೊಂಡಿದ್ದಾರೆ. ಈ ಸಂದರ್ಭದಲ್ಲಿ ಗಾಯಾಳುಗಳಿಗೆ ತ್ವರಿತ ವೈದ್ಯಕೀಯ ನೆರವನ್ನು ಒದಗಿಸಲಾಗಿದೆ ಎಂದು ವರದಿಯಾಗಿದೆ.
ಈ ನಡುವೆ, ಸೂರತ್ ಸಂಸದ ಹಾಗೂ ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವ ದರ್ಶನ ಜರ್ದೋಶ್ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಿದರು.