×
Ad

ಛತ್ತೀಸ್ ಗಢ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ 10 ಮಾವೋವಾದಿಗಳು ಬಲಿ

Update: 2024-11-22 11:57 IST

ಸಾಂದರ್ಭಿಕ ಚಿತ್ರ (credit: NDTV)

ರಾಯ್ಪುರ: ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್‌ ಗೆ 10 ಮಂದಿ ಮಾವೋವಾದಿಗಳು ಬಲಿಯಾಗಿದ್ದಾರೆ ಎಂದು NDTV ವರದಿ ಮಾಡಿದೆ.

ಛತ್ತೀಸ್ಗಢದ ಸುಕ್ಮಾ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ಸ್(ಡಿಆರ್ಜಿ) ಮತ್ತು ಮಾವೋವಾದಿಗಳ ನಡುವೆ ಶುಕ್ರವಾರ ಬೆಳಗ್ಗಿನಿಂದ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಬಸ್ತಾರ್ ಐಜಿಪಿ ಸುಂದರರಾಜ್ ಹೇಳಿದ್ದಾರೆ.

ಶುಕ್ರವಾರ ಮುಂಜಾನೆ ಭೇಜ್ಜಿ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ. ಭದ್ರತಾ ಪಡೆಗಳು ಘಟನಾ ಸ್ಥಳದಿಂದ ಹಲವಾರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚೌಹಾನ್ ಮಾಹಿತಿ ನೀಡಿದ್ದಾರೆ.

ಮಾವೋವಾದಿಗಳು ಒಡಿಶಾ ಮೂಲಕ ಛತ್ತೀಸ್‌ಗಢ ಪ್ರವೇಶಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ(ಡಿಆರ್‌ಜಿ) ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News