×
Ad

ಹೈದರಾಬಾದ್ | ಚಾರ್‌ಮಿನಾರ್‌ ಸಮೀಪದ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ: ಕನಿಷ್ಠ 17 ಮಂದಿ ಮೃತ್ಯು

Update: 2025-05-18 11:48 IST
Photo credit: NDTV

ಹೈದರಾಬಾದ್: ತೆಲಂಗಾಣದ ಚಾರ್‌ಮಿನಾರ್‌ ಬಳಿಯ ಕಟ್ಟಡವೊಂದರಲ್ಲಿ ರವಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು Times of India ವರದಿ ಮಾಡಿದೆ.

ಚಾರ್​ಮಿನಾರ್ ಬಳಿಯ ಗುಲ್ಜಾರ್​ ಹೌಸ್​ನಲ್ಲಿರುವ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶೀಘ್ರದಲ್ಲೇ ಮೂರು ಅಂತಸ್ತಿನ ಕಟ್ಟಡದ ಮೇಲೆ ಬೆಂಕಿ ವ್ಯಾಪಿಸಿದೆ.

ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಈ ಕುರಿತು ಪ್ರತಿಕ್ರಿಯಿಸಿ, ಬೆಳಿಗ್ಗೆ 6.30 ರ ಸುಮಾರಿಗೆ ಘಟನೆ ಬಗ್ಗೆ ನನಗೆ ಮಾಹಿತಿ ಬಂದಿದೆ. ಇಂತಹ ಘಟನೆಗಳು ತುಂಬಾ ದುಃಖಕರ. ನಾನು ಕೇಂದ್ರ ಸರಕಾರ ಮತ್ತು ಪ್ರಧಾನಿಯೊಂದಿಗೆ ಈ ಕುರಿತು ಮಾತನಾಡುತ್ತೇನೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News