×
Ad

ಜಮ್ಮುಕಾಶ್ಮೀರ | ಕುಪ್ವಾರಾದಲ್ಲಿ ಭದ್ರತಾಪಡೆಗಳಿಂದ ಇಬ್ಬರು ಭಯೋತ್ಪಾದಕರ ಹತ್ಯೆ

Update: 2025-11-08 10:20 IST

 Photo | ndtv

ಕುಪ್ವಾರಾ : ಜಮ್ಮುಕಾಶ್ಮೀರದ ಕುಪ್ವಾರಾದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಸಂಭಾವ್ಯ ಒಳನುಸುಳುವಿಕೆ ಪ್ರಯತ್ನದ ಬಗ್ಗೆ ದೊರೆತ ಗುಪ್ತಚರ ಮಾಹಿತಿ ಹಿನ್ನೆಲೆ ಶುಕ್ರವಾರ ಕುಪ್ವಾರಾದ ಕೇರನ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ನಡೆಸಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ.  

ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಿದೆ ಎಂದು  ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News