×
Ad

ದಿಲ್ಲಿ | ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ; ಮೂವರು ಮೃತ್ಯು, ಇಬ್ಬರಿಗೆ ಗಾಯ

Update: 2025-11-30 00:15 IST

PC | news18

ಹೊಸದಿಲ್ಲಿ: ದಕ್ಷಿಣ ದಿಲ್ಲಿಯ ಟಿಗ್ರಿ ಎಕ್ಸ್‌ಟೆನ್ಶನ್‌ ನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನೆಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಾದರಕ್ಷೆಗಳ ಅಂಗಡಿಯಿಂದ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಕಟ್ಟಡದ ಮೇಲ್ಮಹಡಿಗಳಿಗೆ ವ್ಯಾಪಿಸಿದ್ದರಿಂದ ದೊಡ್ಡ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜೆ 6.24ಕ್ಕೆ ಪೊಲೀಸ್ ಕಂಟ್ರೋಲ್ ರೂಂ ಗೆ ಬಂದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ, ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿರುವುದು ಕಂಡು ಬಂತು ಎಂದು ಹಿರಿಯ ಪೊಲೀಸ್ ಅಧಿಕಾರಿ ವಿವರಿಸಿದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಲುಪುವವರೆಗೆ ಜ್ವಾಲೆಗಳು ಕಟ್ಟಡದ ಬಹುಭಾಗವನ್ನು ಹೊತ್ತಿ ಆವರಿಸಿದ್ದವು ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಕಟ್ಟಡದೊಳಗೆ ಸಿಲುಕಿದ್ದ ಇಬ್ಬರು ಮಹಿಳೆಯರನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಂಕಿಯ ಮೂಲ ಹಾಗೂ ಕಾರಣ ಪತ್ತೆಹಚ್ಚಲು ಅಪರಾಧ ಮತ್ತು ವಿಧಿವಿಜ್ಞಾನ ವಿಭಾಗದ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News