×
Ad

ಉತ್ತರ ಪ್ರದೇಶ | ರಸ್ತೆಬದಿ ನಿಂತಿದ್ದ ಪಾದಚಾರಿಗಳ ಮೇಲೆ ಹರಿದ ಕಾರು : ಐವರು ಮೃತ್ಯು

Update: 2025-10-25 10:32 IST
Photo | NDTV

ಆಗ್ರಾ : ಉತ್ತರ ಪ್ರದೇಶದ ಆಗ್ರಾದಲ್ಲಿ ರಸ್ತೆಬದಿಯಲ್ಲಿ ನಿಂತಿದ್ದ ಪಾದಚಾರಿಗಳ ಮೇಲೆ ವೇಗವಾಗಿ ಬಂದ ಎಸ್‌ಯುವಿ ಕಾರು ಹರಿದು ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ನಾಗಲಾ ಬುಧಿ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ವಿಭಜಕಕ್ಕೆ ಢಿಕ್ಕಿ ಹೊಡೆದ ನಂತರ ರಸ್ತೆಬದಿಯಲ್ಲಿ ನಿಂತಿದ್ದ ಜನರ ಗುಂಪಿನ ಮೇಲೆ ಹರಿದಿದೆ ಎಂದು ತಿಳಿದು ಬಂದಿದೆ.

ಮೃತರನ್ನು ಬಬ್ಲಿ(33) ಬಾನು ಪ್ರತಾಪ್ (25) ಕಮಲ್ (23) ಕೃಷ್ಣ (20) ಬಂತೇಶ್ (21) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಪೊಲೀಸರ ಪ್ರಕಾರ, ಕಾರನ್ನು ನಗರದ ದಯಾಳ್‌ಬಾಗ್ ಪ್ರದೇಶದ ನಿವಾಸಿ ಅಂಶು ಗುಪ್ತಾ ಎಂಬವರು ಚಲಾಯಿಸುತ್ತಿದ್ದರು. ಅಪಘಾತದ ನಂತರ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News