Photo Credit : PTI

ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಕಲ್ಪಿಸುವ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಕೇಂದ್ರ ಸಚಿವ ಸಂಪುಟವು ಶುಕ್ರವಾರ ಮಹತ್ವದ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.

ಇದರ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭೆಯ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಈ ಕ್ರಮವು ದಕ್ಷಿಣ ರಾಜ್ಯಗಳ ಪ್ರಮುಖ ಬೇಡಿಕೆಗೆ ಅನುಗುಣವಾಗಿರಲಿದೆ ಎಂದು ಹೇಳಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor