ಅಸ್ಸಾಂನಲ್ಲಿ 5.8 ತೀವ್ರತೆಯ ಭೂಕಂಪ : ಪಶ್ಚಿಮ ಬಂಗಾಳ, ಭೂತಾನ್‌ನಲ್ಲೂ ಕಂಪಿಸಿದ ಭೂಮಿ
Update: 2025-09-14 18:43 IST
ಸಾಂದರ್ಭಿಕ ಚಿತ್ರ
ಗುವಾಹಟಿ : ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ಪಶ್ಚಿಮ ಬಂಗಾಳ ಮತ್ತು ನೆರೆಯ ಭೂತಾನ್‌ನಲ್ಲೂ ಕಂಪನದ ಅನುಭವವಾಗಿರುವ ಬಗ್ಗೆ ವರದಿಯಾಗಿದೆ.
ರವಿವಾರ ಸಂಜೆ 4.41ರ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದು ಉದಲ್ಗುರಿ ಜಿಲ್ಲೆಯಲ್ಲಿ 5ಕಿ.ಮೀ ಆಳದಲ್ಲಿ ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ ತಿಳಿಸಿದೆ. ಇಲ್ಲಿಯವರೆಗೆ ಯಾವುದೇ ಗಾಯ ಅಥವಾ ಆಸ್ತಿಪಾಸ್ತಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.
ಭೂಕಂಪದ ಬಗ್ಗೆ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಸ್ಸಾಂನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಎಲ್ಲರೂ ಸುರಕ್ಷಿತವಾಗಿ ಎಚ್ಚರಿಕೆಯಿಂದಿರಿ ಎಂದು ಬರೆದುಕೊಂಡಿದ್ದಾರೆ.