×
Ad

ಹರಿದ್ವಾರ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ : ಕನಿಷ್ಠ ಆರು ಮಂದಿ ಮೃತ್ಯು

Update: 2025-07-27 10:36 IST

Photo | indiatoday

ಹರಿದ್ವಾರ : ಉತ್ತರಾಖಂಡದ  ಹರಿದ್ವಾರದಲ್ಲಿನ ಮಾನಸ ದೇವಿ ದೇವಸ್ಥಾನದಲ್ಲಿ ರವಿವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗರ್ವಾಲ್ ವಿಭಾಗ ಆಯುಕ್ತ ವಿನಯ್ ಶಂಕರ್ ಪಾಂಡೆ ಘಟನೆಯನ್ನು ದೃಢಪಡಿಸಿದ್ದಾರೆ. ದೇವಸ್ಥಾನಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ ಕಾಲ್ತುಳಿತ ಸಂಭವಿಸಿದೆ ಎಂದು ಹೇಳಲಾಗಿದೆ.

ಕಾಲ್ತುಳಿತದಲ್ಲಿ ಗಾಯಗೊಂಡ ಭಕ್ತರನ್ನು ಆಂಬ್ಯುಲೆನ್ಸ್‌ಗಳಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ವೀಡಿಯೊ ವೈರಲ್ ಆಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News