×
Ad

ಗುಜರಾತ್ ನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ: ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

Update: 2024-07-06 18:28 IST

Photo: NDTV

ಸೂರತ್: ಸೂರತ್ ನಗರದ ಸಚಿನ್ ಪಾಲಿ ಗ್ರಾಮದಲ್ಲಿ ಆರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಕಟ್ಟಡಗಳ ಅವಶೇಷಗಳಡಿ ಹಲವಾರು ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು, ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ರಕ್ಷಣಾ ಸಿಬ್ಬಂದಿಗಳು ಕಟ್ಟಡಗಳ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ದೊಡ್ಡ ಗಾತ್ರದ ಕಾಂಕ್ರೀಟ್ ಬ್ಲಾಕ್ ಗಳನ್ನು ತೆರವುಗೊಳಿಸುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಅಧಿಕಾರಿಗಳ ಪ್ರಕಾರ, ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವು ಕಳೆದ ಹಲವಾರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಕುಸಿತಗೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News