×
Ad

ದಿಲ್ಲಿ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 7 ನವಜಾತ ಶಿಶುಗಳು ಮೃತ್ಯು

Update: 2024-05-26 10:58 IST

Photo: PTI

ಹೊಸದಿಲ್ಲಿ: ಭಾರಿ ಬೆಂಕಿ ದುರಂತವೊಂದರಲ್ಲಿ ಏಳು ನವಜಾತ ಶಿಶುಗಳು ಮೃತಪಟ್ಟಿರುವ ಘಟನೆ ಶನಿವಾರ ದಿಲ್ಲಿಯ ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ದಿಲ್ಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿರುವ ಮಕ್ಕಳ ಆರೈಕೆ ಕೇಂದ್ರವೊಂದರಲ್ಲಿ ರಾತ್ರಿ 11.32ರ ವೇಳೆಗೆ ಘಟನೆ ನಡೆದಿದೆ.

ಈ ಘಟನೆಯಲ್ಲಿ ಕಟ್ಟಡದ ಮೊದಲ ಮಹಡಿಯಿಂದ 12 ನವಜಾತ ಶಿಶುಗಳನ್ನು ರಕ್ಷಿಸಲಾಗಿದ್ದರೂ, ಉಳಿದ ಏಳು ನವಜಾತ ಶಿಶುಗಳು ಆಸ್ಪತ್ರೆಯಲ್ಲಿನ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿವೆ ಎಂದೂ ಅವರು ಹೇಳಿದ್ದಾರೆ.

ಸದ್ಯ ಐದು ನವಜಾತ ಶಿಶುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಗ್ನಿ ದುರಂತದ ಕಾರಣವನ್ನು ಇನ್ನಷ್ಟೆ ಪತ್ತ ಹಚ್ಚಬೇಕಿದ್ದು, ಈ ಸಂಬಂಧ ಆಸ್ಪತ್ರೆಯ ಮಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಕುರಿತು ಸಂತಾಪ ಸೂಚಿಸಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಆಸ್ಪತ್ರೆಯಲ್ಲಿ ಮಕ್ಕಳು ಮೃತಪಟ್ಟಿರುವ ಘಟನೆ ಹೃದಯವಿದ್ರಾವಕವಾಗಿದೆ ಎಂದು ಹೇಳಿದ್ದಾ ರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News