×
Ad

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಸೈನಿಕರಿಗೆ ಪ್ರಧಾನಿ ಮೋದಿ ನಮನ

Update: 2026-01-26 10:26 IST

Credit: Screengrab from DD National

ಹೊಸದಿಲ್ಲಿ: 77ನೇ ಗಣರಾಜ್ಯೋತ್ಸವದ ಹಿನ್ನೆಲೆ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಸೈನಿಕರಿಗೆ ಪ್ರಧಾನಿ ಮೋದಿ ಗೌರವ ನಮನ ಸಲ್ಲಿಸಿದರು.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದಿಲ್ಲಿಯಾದ್ಯಂತ ಬಿಗಿ ಭದ್ರತೆ ಒದಗಿಸಲಾಗಿದೆ.  ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೋ ಕೋಸ್ಟಾ ಅವರು ಕರ್ತವ್ಯ ಪಥದಲ್ಲಿ ನಡೆಯುವ ಗಣ ರಾಜ್ಯೋತ್ಸವದ ಪರೇಡ್‌ನಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದಾರೆ.

ಇದಕ್ಕೂ ಮೊದಲು ಎಕ್ಸ್‌ನಲ್ಲಿ ಶುಭಾಶಯ ಕೋರಿ ಪೋಸ್ಟ್‌ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಗಣರಾಜ್ಯೋತ್ಸವವು ನಮ್ಮ ಸ್ವಾತಂತ್ರ್ಯ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳ ಪ್ರಬಲ ಸಂಕೇತವಾಗಿದೆ. ಈ ಹಬ್ಬವು ರಾಷ್ಟ್ರವನ್ನು ಒಟ್ಟಾಗಿ ನಿರ್ಮಿಸುವ ಸಂಕಲ್ಪದೊಂದಿಗೆ ಮುಂದುವರಿಯಲು ನಮಗೆ ಹೊಸ ಶಕ್ತಿ ಮತ್ತು ಸ್ಫೂರ್ತಿಯನ್ನು ನೀಡುತ್ತದೆ ಎಂದು ಹೇಳಿದ್ದರು.   


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News