×
Ad

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಕಟ್ಟಡಗಳು ಕುಸಿದು 8 ಮಂದಿ ಮೃತ್ಯು

Update: 2023-07-29 13:24 IST

ಚೆನ್ನೈ: ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು India Today ವರದಿ ಮಾಡಿದೆ.

ಶನಿವಾರ ಮುಂಜಾನೆ ಸಂಭವಿಸಿದ ಸ್ಫೋಟದ ಪರಿಣಾಮ ಸಮೀಪದ ಹೋಟೆಲ್ ಕಟ್ಟಡ ಕುಸಿದು ಉಳಿದ ನಾಲ್ಕು ಕಟ್ಟಡಗಳು ಭಾಗಶಃ ಹಾನಿಯಾಗಿವೆ. ಹಲವರು ಸಿಲುಕಿಕೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ 12 ಮಂದಿಯನ್ನು ಇದುವರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News