×
Ad

ಆಂಧ್ರಪ್ರದೇಶ | ಉತ್ಸವದ ವೇಳೆ ದೇವಾಲಯದ ಗೋಡೆ ಕುಸಿತ : 8 ಮಂದಿ ಭಕ್ತರು ಮೃತ್ಯು

Update: 2025-04-30 10:27 IST

Photo | NDTV

ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಸಿಂಹಾಚಲಂನಲ್ಲಿ ದೇವಾಲಯದ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಶ್ರೀ ವರಾಹಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದಲ್ಲಿ ವಾರ್ಷಿಕ ಚಂದನಮಹೋತ್ಸವದ ಸಂದರ್ಭದಲ್ಲಿ ಭಕ್ತರು ಟಿಕೆಟ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗ ಗೋಡೆ ಕುಸಿದಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್‌) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಅವಶೇಷಗಳಡಿ ಸಿಲುಕಿದ ಭಕ್ತರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಗಾಯಾಳುಗಳನ್ನು ಕಿಂಗ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಜಾನೆ 2.30 ರಿಂದ 3.30ರ ನಡುವೆ ಈ ಪ್ರದೇಶದಲ್ಲಿ ಭಾರೀ ಗಾಳಿ ಮಳೆ ಸುರಿದಿತ್ತು. ಗೋಡೆಯೂ ಮಣ್ಣಿನಿಂದ ಆವೃತವಾಗಿತ್ತು. ಸಿಂಹಾಚಲಂ ಗುಡ್ಡಗಾಡು ಪ್ರದೇಶವಾದ ಕಾರಣ ಮಣ್ಣು ಸಡಿಲಗೊಂಡು ಗೋಡೆ ಕುಸಿದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.  

ಸ್ಥಳಕ್ಕೆ ಆಂಧ್ರಪ್ರದೇಶದ ಗೃಹ ಸಚಿವೆ ವಂಗಲಪುಡಿ ಅನಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News