ಅಬಕಾರಿ ನೀತಿ ಪ್ರಕರಣ: ಆಪ್ ಸಂಸದ ಸಂಜಯ್ ಸಿಂಗ್ ಗೆ ಜಾಮೀನು
Update: 2024-04-02 14:24 IST
ಆಪ್ ಸಂಸದ ಸಂಜಯ್ ಸಿಂಗ್ (PTI)
ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಆರು ತಿಂಗಳಿನಿಂದ ಜೈಲಿನಲ್ಲಿರುವ ಆಪ್ ಸಂಸದ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
ಸಂಜಯ್ ಸಿಂಗ್ ಅವರಿಗೆ ಜಾಮೀನು ಮಂಜೂರು ಮಾಡಲು ಯಾವುದೇ ತಕರಾರು ಇಲ್ಲ ಎಂಬುವುದನ್ನು ಪರಿಗಣಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದಿಪಾಂಕರ್ ದತ್ತ ಮತ್ತು ಪಿ.ಬಿ.ವರಾಳೆ ಅವರಿದ್ದ ಪೀಠವು ಸಂಜಯ್ ಸಿಂಗ್‌ಗೆ ಜಾಮೀನು ಮಂಜೂರು ಮಾಡಿತು.