×
Ad

ಪುಣೆ ಎಫ್‌ಟಿಐಐ ಅಧ್ಯಕ್ಷರಾಗಿ ನಟ ಆರ್ ಮಾಧವನ್

Update: 2023-09-01 20:37 IST

ನಟ ಆರ್ ಮಾಧವನ್

ನವದೆಹಲಿ: ಪುಣೆಯಲ್ಲಿರುವ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಫ್‌ಟಿಐಐ) ಅಧ್ಯಕ್ಷರಾಗಿ ಮತ್ತು ಆಡಳಿತ ಮಂಡಳಿಯ ಚೇರ್‌ಮನ್‌ ಆಗಿ ನಟ ಆರ್ ಮಾಧವನ್ ಅವರು ನಾಮನಿರ್ದೇಶನಗೊಂಡಿದ್ದಾರೆ.

ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಈ ಮಾಹಿತಿಯನ್ನು ಘೋಷಿಸಿದ್ದು, ಮಾಧವನ್‌ ಅವರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

“ಎಫ್‌ಟಿಐಐ ಅಧ್ಯಕ್ಷರಾಗಿ ಮತ್ತು ಆಡಳಿತ ಮಂಡಳಿಯ ಚೇರ್‌ಮನ್‌ ಆಗಿ ನಾಮನಿರ್ದೇಶನಗೊಂಡಿದ್ದಕ್ಕಾಗಿ ಮಾಧವನ್‌ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಅಪಾರ ಅನುಭವ ಮತ್ತು ನೈತಿಕತೆಯು ಈ ಸಂಸ್ಥೆಯನ್ನು ಇನ್ನಷ್ಟು ಉತ್ಕೃಷ್ಟಗೊಳಿಸಿ, ಧನಾತ್ಮಕ ಬದಲಾವಣೆಗಳನ್ನು ತರುತ್ತದೆ ಮತ್ತು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ನನಗೆ ಖಾತ್ರಿಯಿದೆ. ನಿಮಗೆ ನನ್ನ ಶುಭಾಶಯಗಳು" ಎಂದು‌ ಸಚಿವ ಅನುರಾಗ್ ಠಾಕೂರ್ ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನಟ ಮಾಧವನ್‌, “ಎಲ್ಲಾ ನಿರೀಕ್ಷೆಗಳನ್ನು ಪೂರೈಸಲು ನಾನು ನನ್ನ ಕೈಲಾದಷ್ಟು ಮಾಡುತ್ತೇನೆ" ಎಂದು ಅನುರಾಗ್‌ ಠಾಕೂರ್‌ ಅವರನ್ನು ಉಲ್ಲೇಖಿಸಿ ಧನ್ಯವಾದವನ್ನು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News