×
Ad

ನನ್ನ ಹೃದಯ ಒಡೆದು ಹೋಗಿದೆ, ನೋವು, ದುಃಖದಿಂದ ನರಳುತ್ತಿದ್ದೇನೆ : ಕಾಲ್ತುಳಿತ ಘಟನೆ ಬಗ್ಗೆ ನಟ ವಿಜಯ್ ಮೊದಲ ಪ್ರತಿಕ್ರಿಯೆ

Update: 2025-09-28 10:42 IST

Photo | hindustantimes

ಹೊಸದಿಲ್ಲಿ : ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಟಿವಿಕೆ ಅಧ್ಯಕ್ಷ ವಿಜಯ್, ಘಟನೆಯಿಂದ ನನ್ನ ಹೃದಯ ಒಡೆದು ಹೋಗಿದೆ. ನಾನು ತೀವ್ರ ನೋವು ಮತ್ತು ದುಃಖದಿಂದ ನರಳುತ್ತಿದ್ದೇನೆ ಎಂದು ಹೇಳಿದ್ದಾರೆ.

ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ನಟ, ರಾಜಕಾರಣಿ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದ ನಂತರ 10 ಮಕ್ಕಳು, 17 ಮಹಿಳೆಯರು ಸೇರಿದಂತೆ ಕನಿಷ್ಠ 39 ಜನರು ಮೃತಪಟ್ಟಿದ್ದಾರೆ. 

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ನಟ ವಿಜಯ್, "ನನ್ನ ಹೃದಯ ಒಡೆದು ಹೋಗಿದೆ.  ಪದಗಳಲ್ಲಿ ವ್ಯಕ್ತಪಡಿಸಲಾಗದ ನೋವು ಮತ್ತು ದುಃಖದಲ್ಲಿ ನಾನು ನರಳುತ್ತಿದ್ದೇನೆ. ಕರೂರಿನಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ ಸಹೋದರಿಯರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News