×
Ad

ಆಗ್ರಾ : ಹೋಂಸ್ಟೇಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಐವರ ಬಂಧನ

Update: 2023-11-13 11:02 IST

Photo: freepik

ಆಗ್ರಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಆಗ್ರಾದ ಹೋಂಸ್ಠೆಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ರವಿವಾರ ತಿಳಿಸಿದ್ದಾರೆ. ಶನಿವಾರ ತಡರಾತ್ರಿ ಸಂತ್ರಸ್ತೆಯಿಂದ ತಮಗೆ ಕರೆ ಬಂದಿದ್ದು, ಆಕೆ ಕೆಲಸ ಮಾಡುವ ಹೋಂಸ್ಟೇಗೆ ಧಾವಿಸಿ, ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

"ಶನಿವಾರ ರಾತ್ರಿ, ತಾಜ್‌ಗಂಜ್ ಪೊಲೀಸರಿಗೆ ಹೋಂಸ್ಟೇಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಹಲ್ಲೆ ಮಾಡಿರುವ ಕುರಿತು ಕರೆ ಬಂದಿತ್ತು. ಸಂತ್ರಸ್ತೆ ನೀಡಿದ ದೂರಿನ ಪ್ರಕಾರ ಪ್ರಕರಣವನ್ನು ದಾಖಲಿಸಲಾಗಿದೆ" ಎಂದು ಆಗ್ರಾ ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಅರ್ಚನಾ ಸಿಂಗ್ ಹೇಳಿದ್ದಾರೆ.

ಪ್ರಕರಣದ ಕುರಿತಂತೆ ಒಬ್ಬ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಆಗ್ರಾ ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ಹೋಟೆಲ್ ಉದ್ಯೋಗಿ ಎಂದು ಪೊಲೀಸರು ತಿಳಿಸಿದ್ದಾರೆ. ವೈರಲ್ ವೀಡಿಯೊ ಒಂದು ಸಂತ್ರಸ್ತೆಯ ಮೇಲೆ ಪುರುಷರ ಗುಂಪೊಂದು ಹಲ್ಲೆ ನಡೆಸುತ್ತಿರುವುದನ್ನು ತೋರಿಸುತ್ತದೆ.

"ಘಟನೆಯ ನಂತರ ನಾಲ್ವರು ಪುರುಷರು ಮತ್ತು ಮಹಿಳೆಯನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನು ಮಾಡಲಾಗುವುದು ಮತ್ತು ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News