×
Ad

ಅಹ್ಮದಾಬಾದ್ | ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

Update: 2025-06-13 09:53 IST

ಅಹ್ಮದಾಬಾದ್ : ಏರ್ ಇಂಡಿಯಾ ವಿಮಾನ ದುರಂತದ ಹಿನ್ನೆಲೆ ಅಹ್ಮದಾಬಾದ್‌ಗೆ ತೆರಳಿದ ಪ್ರಧಾನಿ ಮೋದಿ ವಿಮಾನ ಪತನವಾದ ಬಿಜೆ ವೈದ್ಯಕೀಯ ಕಾಲೇಜ್‌ ಹಾಸ್ಟೆಲ್‌ ಬಳಿ ಪರಿಶೀಲನೆ ನಡೆಸಿದ್ದಾರೆ.  

ಇದಲ್ಲದೆ ಅಹ್ಮದಾಬಾದ್ ಸಿವಿಲ್ ಆಸ್ಪತ್ರೆಗೆ ತೆರಳಿ ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ಬ್ರಿಟಿಷ್‌ ಪ್ರಜೆಯನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದಾರೆ. ಈ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು, ಕೇಂದ್ರ ರಾಜ್ಯ ಸಚಿವ ಮುರಳೀಧರ್  ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ ಮೋದಿಗೆ ಸಾಥ್‌ ನೀಡಿದ್ದರು. 

ಆ ಬಳಿಕ ಅಹ್ಮದಾಬಾದ್ ವಿಮಾನ ನಿಲ್ಧಾಣದಲ್ಲಿ ಪ್ರಧಾನಿ ಮೋದಿ ಸಭೆ ನಡೆಸುತ್ತಿದ್ದಾರೆ.

ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನ ಗುರುವಾರ ಅಹ್ಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತ್ತು. ಘಟನೆಯಲ್ಲಿ 241ಮಂದಿ ಮೃತಪಟ್ಟಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News