×
Ad

ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮಡಿದವರಿಗೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್

Update: 2025-06-12 19:37 IST

PC : PTI 

ಹೊಸದಿಲ್ಲಿ: ಅಹ್ಮದಾಬಾದ್ ನಲ್ಲಿ ಸಂಭವಿಸಿದ ಟಾಟಾ ಗ್ರೂಪ್ ಮಾಲಕತ್ವದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮಡಿದವರಿಗೆ 1 ಕೋಟಿ ರೂ. ಪರಿಹಾರ ಘೋಷಿಸಿದೆ.

ಟಾಟಾ ಗ್ರೂಪ್ ನ ಮಾಲಕತ್ವದಲ್ಲಿರುವ ಏರ್ ಇಂಡಿಯಾದ ವಿಮಾನವೊಂದು ಗುಜರಾತ್ ನ ಅಹ್ಮದಾಬಾದ್ ನಿಂದ ಲಂಡನ್ ಗೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಗುರುವಾರ ಮಧ್ಯಾಹ್ನ 1.30ರ ಸುಮಾರಿಗೆ ಪತನವಾಗಿತ್ತು. ಈ ವಿಮಾನದಲ್ಲಿದ್ದ ಕನಿಷ್ಠ 240 ಮಂದಿ ಮೃತಪಟ್ಟಿದ್ದಾರೆ ಎಂದು ಎಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಟಾಟಾ ಗ್ರೂಪ್, ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬ ವ್ಯಕ್ತಿಯ ಕುಟುಂಬಗಳಿಗೆ ಟಾಟಾ ಗ್ರೂಪ್ 1 ಕೋಟಿ ರೂ.ಗಳನ್ನು ಪರಿಹಾರವಾಗಿ ನೀಡುತ್ತದೆ. ಗಾಯಗೊಂಡವರ ವೈದ್ಯಕೀಯ ವೆಚ್ಚಗಳನ್ನು ಭರಿಸಲಾಗುವುದು. ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಸಿಗುವಂತೆ ನೋಡಿಕೊಳ್ಳಲಾಗುವುದು. ವಿಮಾನ ಪತನವಾದ ಬಿಜೆ ಮೆಡಿಕಲ್ ಹಾಸ್ಟೆಲ್ ನ ನಿರ್ಮಾಣಕ್ಕೂ ನಾವು ಸಹಾಯ ಮಾಡಲಿದ್ದೇವೆ ಎಂದು ಟಾಟಾ ಸನ್ಸ್ ನ ಅಧ್ಯಕ್ಷರಾದ ಎನ್ ಚಂದ್ರಶೇಖರನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News