×
Ad

ಮಹಾರಾಷ್ಟ್ರದ ಬಾರಾಮತಿಯಲ್ಲಿ ಲ್ಯಾಂಡಿಂಗ್‌ ವೇಳೆ ವಿಮಾನ ಪತನ: ಡಿಸಿಎಂ ಅಜಿತ್ ಪವಾರ್ ಸೇರಿ ಐವರು ಮೃತ್ಯು

Update: 2026-01-28 10:01 IST

ಹೊಸದಿಲ್ಲಿ: ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದ ಬಳಿ ಲ್ಯಾಂಡಿಂಗ್‌ ವೇಳೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪತನವಾಗಿತ್ತು. ಘಟನೆಯಲ್ಲಿ ಅಜಿತ್‌ ಪವಾರ್‌ ಸೇರಿ ಐವರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.  

ವಿಮಾನದಲ್ಲಿ ಅಜಿತ್ ಪವಾರ್ ಮತ್ತು ಭದ್ರತಾ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಅವಘಡದಲ್ಲಿ ವಿಮಾನದಲ್ಲಿದ್ದ  ಯಾವುದೇ ವ್ಯಕ್ತಿ ಬದುಕುಳಿದಿಲ್ಲ ಎಂದು ತಿಳಿದು ಬಂದಿದೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ಗೆ ಪ್ರಯತ್ನಿಸುತ್ತಿದ್ದಾಗ ಅವಘಡ ಸಂಭವಿಸಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News