ಅಮೃತಸರ | ಅಕಾಲಿದಳದ ಕೌನ್ಸಿಲರ್ ಹರ್ಜಿಂದರ್ ಸಿಂಗ್‌ಗೆ ಗುಂಡಿಕ್ಕಿ ಹತ್ಯೆ
Update: 2025-05-25 20:25 IST
ಸಾಂದರ್ಭಿಕ ಚಿತ್ರ
ಅಮೃತಸರ: ಪಂಜಾಬ್‌ನ ಅಮೃತಸರದಲ್ಲಿ ರವಿವಾರ ಶಿರೋಮಣಿ ಅಕಾಲಿ ದಳದ ಕೌನ್ಸಿಲರ್ ಹರ್ಜಿಂದರ್ ಸಿಂಗ್ ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಪೊಲೀಸರ ಪ್ರಕಾರ, ದುಷ್ಕರ್ಮಿಗಳು ಕೌನ್ಸಿಲರ್ ಮೇಲೆ ಆರು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಹರ್ಜಿಂದರ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಬೈಕ್‌ನಲ್ಲಿ ಬಂದ ಮೂರರಿಂದ ನಾಲ್ಕು ಮಂದಿ ದುಷ್ಕರ್ಮಿಗಳು ಈ ಕೃತ್ಯವನ್ನು ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹರ್ಜಿಂದರ್ ಸಿಂಗ್ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹರ್ಪಾಲ್ ಸಿಂಗ್ ರಾಂಧವಾ ಹೇಳಿದ್ದಾರೆ.
ʼಈ ಮೊದಲು ಹರ್ಜಿಂದರ್ ಸಿಂಗ್ ಮನೆಯ ಮೇಲೆ ಗುಂಡಿನ ದಾಳಿ ನಡೆಸಿ ಬೆದರಿಕೆ ಹಾಕಿದ್ದ ಅದೇ ದುಷ್ಕರ್ಮಿಗಳು ಈ ಕೃತ್ಯವನ್ನು ಎಸಗಿದ್ದಾರೆʼ ಎಂದು ಹರ್ಜಿಂದರ್ ಸಹೋದರ ಹೇಳಿದ್ದಾರೆ.