×
Ad

ಕಾಲ್ತುಳಿತ ಪ್ರಕರಣ : ನಟ ಅಲ್ಲು ಅರ್ಜುನ್ ಗೆ ಇಂದು ವಿಚಾರಣೆ

Update: 2024-12-24 10:07 IST

Photo | PTI

ಹೈದರಾಬಾದ್: 'ಪುಷ್ಪ-2'  ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆಯ ಭಾಗವಾಗಿ ಮಂಗಳವಾರ ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್ ಗೆ ವಿಚಾರಣೆ ನಡೆಸಲಿದ್ದಾರೆ.

ಹೈದರಾಬಾದ್‌ ನ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಅಲ್ಲು ಅರ್ಜುನ್ ಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಈ ಹಿಂದೆ ತನಿಖೆಗೆ ಸಹಕರಿಸುವುದಾಗಿ ಅಲ್ಲು ಅರ್ಜುನ್ ಹೇಳಿಕೆ ನೀಡಿದ್ದರು.

ಹೈದರಾಬಾದ್‌ ನ ಸಂಧ್ಯಾ ಥಿಯೇಟರ್‌ ನಲ್ಲಿ ಡಿಸೆಂಬರ್ 4ರಂದು 'ಪುಷ್ಪ 2' ಚಿತ್ರದ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ ಮಹಿಳೆಯೋರ್ವರು ಮೃತಪಟ್ಟು, ಆಕೆಯ ಪುತ್ರ ಗಾಯಗೊಂಡಿದ್ದರು. ಈ ಬಗ್ಗೆ ಮೃತ ಮಹಿಳೆಯ ಕುಟುಂಬಸ್ಥರು ಡಿ.5ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಅಲ್ಲು ಅರ್ಜುನ್ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ರದ್ದುಪಡಿಸುವಂತೆ ಕೋರಿ  ತೆಲಂಗಾಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.   

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News