ಜನರ ತೀರ್ಪನ್ನು ಸ್ವೀಕರಿಸುತ್ತೇವೆ : ದಿಲ್ಲಿ ಚುನಾವಣಾ ಸೋಲಿನ ಕುರಿತು ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ
Update: 2025-02-08 15:11 IST
Photo | PTI
ಹೊಸದಿಲ್ಲಿ : ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಆಪ್ ಪಕ್ಷದ ಸೋಲಿನ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಆಪ್ ರಾಷ್ಟ್ರೀಯ ಸಂಚಾಲಕ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ನಾವು ಜನರ ತೀರ್ಪನ್ನು ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.
ʼದಿಲ್ಲಿ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿಯನ್ನು ನಾನು ಅಭಿನಂದಿಸುತ್ತೇನೆ. ಅವರು ನೀಡಿದ ಭರವಸೆಯನ್ನು ಪೂರೈಸುತ್ತಾರೆ ಎಂದು ನಾನು ಭಾವಿಸುತ್ತೇನೆ. ನಾವು ದಿಲ್ಲಿಯ ಜನರಿಗಾಗಿ ಕೆಲಸ ಮಾಡಿದ್ದೇವೆ. ರಾಷ್ಟ್ರ ರಾಜಧಾನಿಯ ಒಟ್ಟಾರೆ ಮೂಲಸೌಕರ್ಯವನ್ನು ಸುಧಾರಿಸಿದ್ದೇವೆ. ಈಗ ನಾವು ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸುತ್ತೇವೆʼ ಎಂದು ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಇದೇ ವೇಳೆ ಆಪ್ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದ ಕೇಜ್ರಿವಾಲ್, ಅವರೆಲ್ಲರೂ ಪಕ್ಷಕ್ಕಾಗಿ ಬಹಳ ಶ್ರಮಿಸಿದ್ದಾರೆ. ನಾವು ಜನರೊಂದಿಗೆ ನಿಂತಿದ್ದೇವೆ, ನಾವು ಯಾವಾಗಲೂ ಅವರಿಗಾಗಿ ರಾಜಕೀಯವನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.