×
Ad

ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟ : ಎಎಸ್‌ಪಿ ಮೃತ್ಯು, ಹಲವು ಪೊಲೀಸರಿಗೆ ಗಾಯ

Update: 2025-06-09 13:39 IST

ಆಕಾಶ್ ರಾವ್ ಗಿರೆಪುಂಜೆ (Photo credit: X)

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಮೃತಪಟ್ಟಿದ್ದಾರೆ ಮತ್ತು ಹಲವು ಪೊಲೀಸರು ಗಾಯಗೊಂಡಿದ್ದಾರೆ.

ಕೊಂಟಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆಕಾಶ್ ರಾವ್ ಗಿರೆಪುಂಜೆ ಮತ್ತು ಇತರ ಸಿಬ್ಬಂದಿಗಳು ಕಾಲ್ನಡಿಗೆಯಲ್ಲಿ ಗಸ್ತು ತಿರುಗುತ್ತಿದ್ದಾಗ ಎರ್ರಾಬೋರ್ ರಸ್ತೆಯ ಡೊಂಡ್ರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.

ನಕ್ಸಲರು ಬಂದ್‌ಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಡೊಂಡ್ರಾ ಗ್ರಾಮದಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದರು. ಈ ವೇಳೆ ನಡೆದ ಸ್ಫೋಟದಲ್ಲಿ ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎಎಸ್‌ಪಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News