×
Ad

ಕೇಜ್ರಿವಾಲ್ ಬಂಧನದ ವಿರುದ್ಧ ಪ್ರತಿಭಟನೆ: ಅತಿಶಿ, ಸೌರಭ್ ಭಾರದ್ವಾಜ್ ಪೊಲೀಸ್ ವಶಕ್ಕೆ

Update: 2024-03-22 12:20 IST

Photo: PTI 

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಬಿಜೆಪಿ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದ ದಿಲ್ಲಿ ಸಂಪುಟ ಸಚಿವರಾದ ಅತಿಶಿ ಹಾಗೂ ಸೌರಭ್ ಭಾರದ್ವಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆಪ್ ಮತ್ತು ಬಿಜೆಪಿ ಕಚೇರಿಗಳಿರುವ ಐಟಿಒ ವಿಭಜಕದ ಬಳಿ ಸೆಕ್ಷನ್ 144ರ ಅನ್ವಯ ಪ್ರತಿಬಂಧಕಾಜ್ಞೆಯನ್ನು ಹೇರಿರುವುದರಿಂದ ಪ್ರತಿಭಟನಾಕಾರರಿಗೆ ಅಲ್ಲಿಂದ ಚದುರುವಂತೆ ಪೊಲೀಸ್ ಅಧಿಕಾರಿಗಳು ಸೂಚಿಸಿದರು. ನಂತರ ಇಬ್ಬರು ಸಚಿವರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ದರು.

ಈ ಸಂದರ್ಭದಲ್ಲಿ ಆಪ್ ಬೆಂಬಲಿಗರು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News