×
Ad

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ ಮಿಚೆಲ್ ಸ್ಟಾರ್ಕ್

Update: 2025-09-02 10:12 IST

Photo | PTI

ಸಿಡ್ನಿ: ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. 2026ರ ಐಸಿಸಿ ಟಿ20 ವಿಶ್ವಕಪ್‌ಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಅವರು ಈ ನಿರ್ಧಾರವನ್ನು ಘೋಷಿಸಿದ್ದಾರೆ.

ಸದ್ಯ ನಾನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಆದರೆ, ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಮುಂದುವರೆಯುವೆ. ಟೆಸ್ಟ್ ಆಡುವುದು ನನ್ನ ಮೊದಲ ಆದ್ಯತೆಯಾಗಿದೆ. 2027ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದೇನೆ ಎಂದು ಮಿಚೆಲ್ ಸ್ಟಾರ್ ಹೇಳಿದ್ದಾರೆ.

ಭಾರತ ಟೆಸ್ಟ್ ಪ್ರವಾಸ, ಆಸ್ಟ್ರೇಲಿಯಾ ಮತ್ತು 2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗಾಗಿ ಎದುರು ನೋಡುತ್ತಿರುವ ನಾನು, ಆಟದಲ್ಲಿ ತಾಜಾತನ ಮತ್ತು ಫಿಟ್ ನೆಸ್ ಕಾಯ್ದುಕೊಳ್ಳಲು ಇದು ನನ್ನ ಉತ್ತಮ ಮಾರ್ಗ ಎಂದು ಭಾವಿಸುತ್ತೇನೆ ಎಂದು ಮಿಚೆಲ್ ಸ್ಟಾರ್ ತಿಳಿಸಿದ್ದಾರೆ.

ಸ್ಟಾರ್ಕ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 79 ವಿಕೆಟ್‌ಗಳನ್ನು ಗಳಿಸುವ ಮೂಲಕ ಆಡಮ್ ಜಂಪಾ ನಂತರ ಆಸ್ಟ್ರೇಲಿಯಾ ಪರ ಎರಡನೇ ಅತ್ಯಧಿಕ ವಿಕೆಟ್‌ಗಳನ್ನು ಗಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News