×
Ad

ಡಾಕಿಂಗ್‌ ಯಶಸ್ವಿ: ಬಾಹ್ಯಾಕಾಶ ನಿಲ್ದಾಣ ತಲುಪಿದ ನಾಲ್ವರು ಗಗನಯಾತ್ರಿಗಳು

Update: 2025-06-26 16:35 IST

Screengrab:X/SpaceX

ಹೊಸದಿಲ್ಲಿ: ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿರುವ ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳಿದ್ದ ಕ್ರೂ ಡ್ರ್ಯಾಗನ್ ಕ್ಯಾಪ್ಸುಲ್ ಗುರುವಾರ ಸಂಜೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಯಶಸ್ವಿಯಾಗಿ ಡಾಕಿಂಗ್‌ ಆಗಿದೆ. ಈ ಮೂಲಕ ಅಂತರ್ ರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ತಲುಪಿದ ಪ್ರಪ್ರಥಮ ಭಾರತೀಯ ಎಂಬ ಹೆಗ್ಗಳಿಕೆಗೆ ಶುಭಾಂಶು ಶುಕ್ಲಾ ಪಾತ್ರರಾಗಿದ್ದಾರೆ.

ಬುಧವಾರ ಆ್ಯಕ್ಸಿಯಮ್ 4 ಮಿಷನ್ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿತ್ತು. 28 ಗಂಟೆಗಳ ಹಾರಾಟದ ಬಳಿಕ ಡ್ರ್ಯಾಗನ್ ಕ್ಯಾಪ್ಸುಲ್ ಗುರಿಯನ್ನು ತಲುಪಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News