×
Ad

ಆಯುಷ್ಮಾನ್ ಆರೋಗ್ಯ ಕೇಂದ್ರಗಳನ್ನು ʼಮಂದಿರʼ ಎಂದು ಮರುನಾಮಕರಣ ಮಾಡುವ ಪ್ರಸ್ತಾವದಿಂದ ವಿನಾಯಿತಿ ಕೋರಿದ ನಾಗಾಲ್ಯಾಂಡ್, ಮಿಜೋರಾಂ

Update: 2024-06-26 16:54 IST

PC : X\ @A_ArogyaMandir

ಹೊಸದಿಲ್ಲಿ: ಆಯುಷ್ಮಾನ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಿಗೆ ಆಯುಷ್ಮಾನ್ ಆರೋಗ್ಯ ಮಂದಿರ ಎಂದು ಮರು ನಾಮಕರಣ ಮಾಡುವುದರಿಂದ ಸಮಾಜ ಮತ್ತು ಚರ್ಚ್‌ಗಳ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟಾಗಲಿದ್ದು, ತಮಗೆ ಇದರಿಂದ ವಿನಾಯಿತಿ ನೀಡಬೇಕು ಎಂದು ಈಶಾನ್ಯ ರಾಜ್ಯಗಳಾದ ಮಿಜೋರಾಂ ಮತ್ತು ನಾಗಾಲ್ಯಾಂಡ್ ರಾಜ್ಯಗಳು ಕೇಂದ್ರ ಸರಕಾರಕ್ಕೆ ಮನವಿ ಮಾಡಿವೆ ಎಂದು The Indian Express ಸುದ್ದಿ ಸಂಸ್ಥೆ ವರದಿ ಮಾಡಿದೆ.

2018ರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಈ ಯೋಜನೆಯಡಿ 12 ವಿಶೇಷ ಆರೋಗ್ಯ ಸೇವೆಗಳನ್ನು ನೀಡುವ ಭರವಸೆ ನೀಡಲಾಗಿದೆ.

ಕಳೆದ ನವೆಂಬರ್ ತಿಂಗಳಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು 'ಆರೋಗ್ಯವೇ ಅತಿ ದೊಡ್ಡ ಸಂಪತ್ತು' ಎಂಬ ಅಡಿ ಬರಹದೊಂದಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ಆಯುಷ್ಮಾನ್ ಆರೋಗ್ಯ ಮಂದಿರಗಳು ಎಂದು ಮರು ನಾಮಕರಣ ಮಾಡಲು ನಿರ್ಧರಿಸಿತ್ತು.

ಆದರೆ, ಈ ಕುರಿತು ಜನವರಿ ತಿಂಗಳಲ್ಲಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದ ಮಿಜೋರಾಂ ರಾಜ್ಯವು, ಈ ಮರು ನಾಮಕರಣ ಪ್ರಕ್ರಿಯೆಯಿಂದ ತನಗೆ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿತ್ತು. ಫೆಬ್ರವರಿ ತಿಂಗಳಲ್ಲಿ ಝೋರಮ್ ಪೀಪಲ್ಸ್ ಮೂವ್‌ಮೆಂಟ್ ಕೂಡಾ ಈ ಬೇಡಿಕೆಯನ್ನು ಪುನರುಚ್ಚರಿಸಿತ್ತು.

ಮಾರ್ಚ್ ತಿಂಗಳಲ್ಲಿ ನಾಗಾಲ್ಯಾಂಡ್ ಕೂಡಾ ಈ ಮರು ನಾಮಕರಣ ಪ್ರಕ್ರಿಯೆ ಕುರಿತು ಕಳವಳ ವ್ಯಕ್ತಪಡಿಸಿ, ತನಗೆ ಈ ಪ್ರಕ್ರಿಯೆಯಿಂ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿತ್ತು.

ಈ ಎರಡು ರಾಜ್ಯಗಳ ಬೇಡಿಕೆಗೆ ಕೇಂದ್ರ ಸರಕಾರ ಇನ್ನಷ್ಟೆ ಪ್ರತಿಕ್ರಿಯೆ ನೀಡಬೇಕಿದೆ. ಮಿಝೋರಾಂ ಮತ್ತು ನಾಗಾಲ್ಯಾಂಡ್ ರಾಜ್ಯಗಳೆರಡೂ ಈವರೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಿಗೆ ಮರು ನಾಮಕರಣ ಮಾಡಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News