×
Ad

ತಪ್ಪುದಾರಿಗೆಳೆಯುವ 'ಪತಂಜಲಿ'ಯ ಜಾಹೀರಾತು | ಸುಪ್ರೀಂ ಕೋರ್ಟ್ ಮುಂದೆ ಬೇಷರತ್ ಕ್ಷಮೆಯಾಚಿಸಿದ ರಾಮ್‌ ದೇವ್‌

Update: 2024-04-09 23:39 IST

ರಾಮದೇವ್‌ (PTI)

ಹೊಸದಿಲ್ಲಿ : ಪತಂಜಲಿ ಆಯುರ್ವೇದದ ಆಚಾರ್ಯ ಬಾಲಕೃಷ್ಣ ಮತ್ತು ಯೋಗ ಗುರು ರಾಮ್‌ದೇವ್ ಅವರು ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಹೊಸ ಅಫಿಡವಿಟ್ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್‌ಗೆ ನೀಡಲಾದ ಭರವಸೆಯನ್ನು ಉಲ್ಲಂಘಿಸಿ ತಪ್ಪುದಾರಿಗೆಳೆಯುವ ವೈದ್ಯಕೀಯ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸುತ್ತಿರುವುದಾಗಿ ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನಮ್ಮಿಂದ ಆದ ಲೋಪಕ್ಕೆ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ. ಈ ತಪ್ಪು ಪುನರಾವರ್ತನೆಯಾಗುವುದಿಲ್ಲ, ಕಾನೂನು ಮತ್ತು ನ್ಯಾಯದ ಘನತೆಯನ್ನು ಎತ್ತಿಹಿಡಿಯಲು ಬದ್ಧರಾಗಿದ್ದೇವೆ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಲು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಏಪ್ರಿಲ್ 10 ಬುಧವಾರ ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ಅಂತಿಮ ತೀರ್ಪು ನೀಡುವ ನಿರೀಕ್ಷೆಯಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News