×
Ad

ನಕ್ಸಲ್ ವಿರೋಧಿ ಕಾರ್ಯಚರಣೆಯಲ್ಲಿ ಮಾವೋವಾದಿ ನಾಯಕ ಕೇಶವ ರಾವ್ ಮೃತ್ಯು: ದೃಢಪಡಿಸಿದ ಅಮಿತ್ ಶಾ

Update: 2025-05-21 19:40 IST

Photo | hindustantimes

ರಾಯ್ಪುರ: ಛತ್ತೀಸ್‌ಗಢದ ಅಬುಜ್ಮದ್ ಅರಣ್ಯದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮಾವೋವಾದಿ ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು ಮೃತಪಟ್ಟಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೃತ 27 ಮಾವೋವಾದಿಗಳಲ್ಲಿ ಬಸವರಾಜು ಕೂಡ ಓರ್ವರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಗೃಹ ಸಚಿವ ಅಮಿತ್ ಶಾ, ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಬಸವರಾಜು ಮೃತಪಟ್ಟಿದ್ದಾರೆ. ಬಸವರಾಜು ಮಾವೋವಾದಿ ಸಂಘಟನೆಯ ಬೆನ್ನೆಲುಬು ಆಗಿದ್ದ. ನಕ್ಸಲಿಸಂ ವಿರುದ್ಧ ಭಾರತ ನಡೆಸುತ್ತಿರುವ ಮೂರು ದಶಕಗಳ ಹೋರಾಟದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆಯ ನಾಯಕನನ್ನು ನಮ್ಮ ಪಡೆಗಳು ತಟಸ್ಥಗೊಳಿಸಿವೆ. ಈ ದಿಟ್ಟ ಕೆಲಸಕ್ಕೆ ನಮ್ಮ ಧೈರ್ಯಶಾಲಿ ಭದ್ರತಾ ಪಡೆಗಳು ಮತ್ತು ಸಂಸ್ಥೆಗಳನ್ನು ನಾನು ಶ್ಲಾಘಿಸುತ್ತೇನೆ ಎಂದು ಹೇಳಿದರು.

ಆಪರೇಷನ್ ಬ್ಲಾಕ್ ಫಾರೆಸ್ಟ್ ಕಾರ್ಯಚರಣೆಯಲ್ಲಿ ಛತ್ತೀಸ್‌ಗಢ, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ 54 ನಕ್ಸಲರನ್ನು ಬಂಧಿಸಲಾಗಿದೆ ಮತ್ತು 84 ನಕ್ಸಲರು ಶರಣಾಗಿದ್ದಾರೆ ಎಂದು ಅಮಿತ್ ಶಾ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News