×
Ad

ಭೀಮಾ ನದಿ ನೀರಿನ ಗುಣಮಟ್ಟ ಕುಸಿತ: ಸಾರ್ವಜನಿಕರು ನೀರನ್ನು ಬಿಸಿ ಮಾಡಿ ಬಳಸುವಂತೆ ಸೂಚನೆ

Update: 2026-05-18 16:43 IST

ಕಲಬುರಗಿ: ಕಲಬುರಗಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಭೀಮಾ ನದಿಯಲ್ಲಿ ಒಳಹರಿವು ಸ್ಥಗಿತಗೊಂಡಿರುವ ಹಿನ್ನೆಲೆ ನದಿಯ ನೀರು ಪಾಚಿಗಟ್ಟಿರುವುದರಿಂದ ನೀರಿನ ಗುಣಮಟ್ಟದಲ್ಲಿ ವ್ಯತ್ಯಾಸ ಉಂಟಾಗಿರುವ ಸಾಧ್ಯತೆ ಇದೆ ಎಂದು ಕಲಬುರಗಿ ಕೆಯುಡಬ್ಲ್ಯೂಎಸ್‌ಎಂಪಿ–ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು  ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರಕ್ಕೆ ಸರಬರಾಜು ಮಾಡಲಾಗುತ್ತಿರುವ ನೀರನ್ನು ಶುದ್ಧೀಕರಿಸಿ ಸೂಪರ್ ಕ್ಲೋರಿನೇಷನ್ ಪ್ರಕ್ರಿಯೆ ಮೂಲಕ ವಿತರಿಸಲಾಗುತ್ತಿದ್ದರೂ, ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಾಗಿ ಕುಡಿಯುವ ಮೊದಲು ನೀರನ್ನು ಕಡ್ಡಾಯವಾಗಿ ಬಿಸಿ ಮಾಡಿ, ಆರಿಸಿ ಹಾಗೂ ಸೋಸಿ ಬಳಸುವಂತೆ ಮನವಿ ಮಾಡಿದ್ದಾರೆ.

ನಗರದ ನಾಗರಿಕರು ತಮ್ಮ ಮನೆಗಳ ನಳ್ಳಿ ಸಂಪರ್ಕಗಳಿಗೆ ತೊಟ್ಟಿಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ಕಲುಷಿತ ನೀರು ಸಂಗ್ರಹವಾಗುವ ಸಾಧ್ಯತೆ ಇದ್ದು, ಅದೇ ನೀರು ಮತ್ತೆ ಪೈಪ್‌ಲೈನ್‌ಗೆ ಸೇರಿ ಇತರ ಗ್ರಾಹಕರಿಗೂ ತಲುಪುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ.

ಇದಲ್ಲದೆ, ನೀರಿನ ತೊಟ್ಟಿಗಳನ್ನು ಅಳವಡಿಸುವುದರಿಂದ ನೀರು ವ್ಯರ್ಥವಾಗುವುದನ್ನು ತಡೆಯಲು ಸಾಧ್ಯವಾಗುತ್ತದೆ. ಈ ಕಾರ್ಯದಲ್ಲಿ ಸಾರ್ವಜನಿಕರು ಕಲಬುರಗಿ ಮಹಾನಗರ ಪಾಲಿಕೆ, ಕೆಯುಐಡಿಎಫ್‌ಸಿ ಹಾಗೂ ಎಲ್ ಆಂಡ್ ಟಿ ಲಿಮಿಟೆಡ್ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News