×
Ad

ನವೆಂಬರ್ 22ರ ಮೊದಲು ಬಿಹಾರದಲ್ಲಿ ವಿಧಾನಸಭಾ ಚುನಾವಣೆ : ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್

Update: 2025-10-05 19:06 IST

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್

ಹೊಸದಿಲ್ಲಿ : ಬಿಹಾರ ವಿಧಾನಸಭೆಯ ಅವಧಿ ಮುಗಿಯುವ ನವೆಂಬರ್ 22ಕ್ಕೂ ಮೊದಲು ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರವಿವಾರ ತಿಳಿಸಿದ್ದಾರೆ.

ಪಾಟ್ನಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜ್ಞಾನೇಶ್ ಕುಮಾರ್, ರಾಜ್ಯದಲ್ಲಿ 243 ಕ್ಷೇತ್ರಗಳಿವೆ. ಅವುಗಳಲ್ಲಿ 38 ಪರಿಶಿಷ್ಟ ಜಾತಿ ಮತ್ತು ಎರಡು ಪರಿಶಿಷ್ಟ ಪಂಗಡ ಕ್ಷೇತ್ರಗಳು ಸೇರಿವೆ. ಬಿಹಾರ ವಿಧಾನಸಭೆಯ ಅವಧಿ ನವೆಂಬರ್ 22, 2025ರಂದು ಕೊನೆಗೊಳ್ಳುತ್ತದೆ. ಅದಕ್ಕಿಂತ ಮೊದಲು ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ ಮೊದಲ ಬಾರಿಗೆ ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ಅನ್ನು ಜೂನ್ 24, 2025ರಂದು ಪ್ರಾರಂಭಿಸಲಾಯಿತು ಮತ್ತು ನಿಗದಿತ ಗಡುವಿನೊಳಗೆ ಪೂರ್ಣಗೊಳಿಸಲಾಯಿತು ಎಂದು ಹೇಳಿದರು.

ಎಸ್ಐಆರ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕೆ ಮತದಾರರನ್ನು ಅಭಿನಂದಿಸಿದ ಮುಖ್ಯ ಚುನಾವಣಾ ಆಯುಕ್ತರು, ಜನರು ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಮತ್ತು ಮತದಾನವನ್ನು ಪ್ರಜಾಪ್ರಭುತ್ವದ ಹಬ್ಬವೆಂದು ಪರಿಗಣಿಸಬೇಕು ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News