ಬಿಹಾರ: ಬಿಜೆಪಿ 17, ಜೆಡಿಯು 16 ಕ್ಷೇತ್ರಗಳಲ್ಲಿ ಸ್ಪರ್ಧೆ; ಪಾಸ್ವಾನ್ ಪಕ್ಷಕ್ಕೆ 5 ಸ್ಥಾನ ಹಂಚಿಕೆ

Update: 2024-03-18 17:57 GMT

Photo: PTI 

ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರದ ಸ್ಥಾನ ಹಂಚಿಕೆಯ ಒಪ್ಪಂದವನ್ನು ಎನ್‌ಡಿಎ ಸೋಮವಾರ ಅಂತಿಮಗೊಳಿಸಿದೆ.

ರಾಜ್ಯದಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಜೆಡಿಯು 16 ಹಾಗೂ ಎಲ್ಜೆಪಿ (ರಾಮ್ ವಿಲಾಸ್ ಪಾಸ್ವಾನ್) 5 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಹಿಂದೂಸ್ತಾನಿ ಅವಾಮ್ ಮೋರ್ಚಾ (HAM) ಹಾಗೂ ರಾಷ್ಟ್ರೀಯ ಲೋಕ ಮೋರ್ಚಾ (RLM) ತಲಾ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ.

ಬಿಹಾರದಲ್ಲಿ ಎನ್ಡಿಎ ಬಿಜೆಪಿ, ಜೆಡಿಯು, ಚಿರಾಗ್ ಪಾಸ್ವಾನ್ರ ಎಲ್ಜೆಪಿ (ರಾಮ್ ವಿಲಾಸ್), ಕೇಂದ್ರ ಸಚಿವ ಪಶುಪತಿ ಕುಮಾರ್ ಪರಸ್ ಅವರ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (RLJP), ಮಾಜಿ ಮುಖ್ಯಮಂತ್ರಿ ಜಿತಿನ್ ರಾಮ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ (Hm) ಹಾಗೂ ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಅವರ ರಾಷ್ಟ್ರೀಯ ಲೋಕ ಮೋರ್ಚಾ (RLM) ಪಕ್ಷಗಳನ್ನು ಒಳಗೊಂಡಿದೆ.

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News