30 ಶಾಲಾ ಮಕ್ಕಳನ್ನು ಹೊತ್ತೊಯುತ್ತಿದ್ದ ದೋಣಿ ಪಲ್ಟಿ, 10 ಮಕ್ಕಳು ನಾಪತ್ತೆ
Update: 2023-09-14 12:46 IST
Photo: PTI, ಸಾಂದರ್ಭಿಕ ಚಿತ್ರ
ಪಾಟ್ನಾ: ಬಿಹಾರದ ಮುಜಾಝಾಫರ್ ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ ಸುಮಾರು 30 ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ.
ಘಟನೆಯಿಂದ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದ್ದು, ಉಳಿದ ಮಕ್ಕಳು ನಾಪತ್ತೆಯಾಗಿದ್ದು ಅವರಿಗಾಗಿ ಶೋಧ ಮುಂದುವರಿದಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳನ್ನು ಆರಂಭಿಸಿದೆ
ಮುಖ್ಯಮಂತ್ರಿ ನಿತೀಶ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲಾ ಮ್ಯಾಜಿಸ್ಟ್ರೇಟ್ ಸೇರಿದಂತೆ ಹಿರಿಯ ಜಿಲ್ಲಾಧಿಕಾರಿಗಳಿಗೆ ಅಪಘಾತದ ಸ್ಥಳಕ್ಕೆ ತೆರಳಲು ಸೂಚನೆ ನೀಡಲಾಗಿದೆ ಹಾಗೂ ಮಕ್ಕಳ ಕುಟುಂಬಗಳಿಗೆ ನೆರವು ಮತ್ತು ಬೆಂಬಲ ನೀಡಲಾಗುವುದು ಎಂದು ಹೇಳಿದರು