ಬಿಹಾರ | ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣ : ಪೊಲೀಸ್ ಎನ್‌ಕೌಂಟರ್‌ಗೆ ಓರ್ವ ಆರೋಪಿ ಬಲಿ
Update: 2025-07-08 10:19 IST
Photo | NDTV
ಪಾಟ್ನಾ : ಬಿಹಾರದ ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಆರೋಪಿಗಳಲ್ಲಿ ಓರ್ವನನ್ನು ಪಾಟ್ನಾ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ.
ʼಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ ಖೇಮ್ಕಾ ಕೊಲೆ ಪ್ರಕರಣದ ಆರೋಪಿಯೋರ್ವನನ್ನು ಹತ್ಯೆ ಮಾಡಲಾಗಿದೆ. ನಿತೀಶ್ ಕುಮಾರ್ ಜಿ ಪ್ರತಿಯೊಂದು ಘಟನೆಯ ಮೇಲ್ವಿಚಾರಣೆ ಮಾಡುತ್ತಿದ್ದಾರೆʼ ಎಂದು ಜೆಡಿಯು ನಾಯಕ ರಾಜೀವ್ ರಂಜನ್ ಹೇಳಿದ್ದಾರೆ.
ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಈಗಾಗಲೇ ಪಾಟ್ನಾ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಶುಕ್ರವಾರ ರಾತ್ರಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗೋಪಾಲ್ ಖೇಮ್ಕಾ ಅವರನ್ನು ಪಾಟ್ನಾದ ಅವರ ನಿವಾಸದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಿದ್ದರು. ಜುಲೈ 6ರಂದು ಗುಲಾಬಿ ಘಾಟ್‌ನಲ್ಲಿ ಗೋಪಾಲ್ ಖೇಮ್ಕಾ ಅವರ ಅಂತ್ಯಕ್ರಿಯೆ ನಡೆದಿತ್ತು.