×
Ad

ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ

Update: 2024-01-28 11:23 IST

Photo : x/@PTI_News

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ರಾಜೀನಾಮೇ ನೀಡಿದ್ದು, ಆರ್‌ಜೆಡಿ ಜತೆಗಿನ ಮೈತ್ರಿಗೆ ವಿದಾಯ ಹೇಳಿದ್ದಾರೆ. ಈ ಮೂಲಕ ಬಿಹಾರದಲ್ಲಿ ಆರ್‌ಜೆಡಿ ಹಾಗೂ ಜೆಡಿಯು ಸಮ್ಮಿಶ್ರ ಸರ್ಕಾರ ಪತನವಾಗಿದೆ.

ರವಿವಾರ ತಮ್ಮ ಬೆಂಬಲಿಗರ, ಶಾಸಕರ ಸಭೆ ನಡೆಸಿದ ನಿತೀಶ್‌ ಕುಮಾರ್‌ ಅವರು ನಂತರ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು. ನಿತೀಶ್‌ ಕುಮಾರ್ ಅವರು ಬಿಜೆಪಿ ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ತೊರೆದ 18 ತಿಂಗಳಲ್ಲೇ ನಿತೀಶ್ ಅವರು ಎನ್‌ಡಿಎ ಮೈತ್ರಿಕೂಟಕ್ಕೆ ಮರಳಿದ್ದಾರೆ. ಕಳೆದ ಒಂಬತ್ತು ವರ್ಷಗಳಲ್ಲಿ ನಾಲ್ಕನೇ ಬಾರಿಗೆ ನಿತೀಶ್‌ ಅವರು ರಾಜಕೀಯ ನಿರ್ಧಾರವನ್ನು ಬದಲಿಸಿ ಮತ್ತೆ ಪಲ್ಟು ಕುಮಾರ್‌ ಹೆಸರನ್ನು ಉಳಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News