ಬಿಹಾರ ಚುನಾವಣೆ | ಸಮಷ್ಠಿಪುರದಲ್ಲಿ ವಿವಿಪ್ಯಾಟ್ ಸ್ಲಿಪ್‌ಗಳ ರಾಶಿ ಪತ್ತೆ ಪ್ರಕರಣ : ಚುನಾವಣಾಧಿಕಾರಿಯ ಅಮಾನತು ; ಎಫ್ಐಆರ್ ದಾಖಲು
Update: 2025-11-09 10:44 IST
Screengrab : X \ @nidhiambedkar
ಪಾಟ್ನಾ: ಬಿಹಾರದ ಸಮಷ್ಟಿಪುರ ಜಿಲ್ಲೆಯಲ್ಲಿ ರಸ್ತೆ ಬದಿಯಲ್ಲಿ ವಿವಿಪ್ಯಾಟ್ ಸ್ಲಿಪ್‌ಗಳ ರಾಶಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಹಾಯಕ ಚುನಾವಣಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟನೆಯಲ್ಲಿ ತಿಳಿಸಿದೆ.
ಸಮಷ್ಟಿಪುರ ಜಿಲ್ಲೆಯ ಸರಾಯಿರಂಜನ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಲೇಜೊಂದರ ಬಳಿ ರಸ್ತೆ ಬದಿಯಲ್ಲಿ ವಿವಿಪ್ಯಾಟ್ ಸ್ಲಿಪ್ ಗಳ ರಾಶಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಪತ್ತೆಯಾಗಿತ್ತು. ಆ ಬಳಿಕ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿತ್ತು.
ಸಾಮಾಜಿಕ ಮಾಧ್ಯಮದಲ್ಲಿ ಈ ಘಟನೆಯ ವೀಡಿಯೊ ವೈರಲ್ ಆದ ಬೆನ್ನಲ್ಲೆ ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ. ಸ್ಥಳಕ್ಕೆ ತೆರಳಿ ಘಟನೆ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟನೆಯಲ್ಲಿ ತಿಳಿಸಿದೆ.