×
Ad

ಬೀರೇನ್ ಸಿಂಗ್ ನೇತೃತ್ವದ ಮಣಿಪುರ ಸರಕಾರದ ವೈಫಲ್ಯ: ಬೆಂಬಲ ಹಿಂಪಡೆದ ಕಾನ್ರಾಡ್ ಸಂಗ್ಮಾ ಪಕ್ಷ

Update: 2024-11-17 19:26 IST

ಬೀರೇನ್ ಸಿಂಗ್ | PC : PTI  

ಇಂಫಾಲ: ಮಣಿಪುರ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸಿರುವ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು ರವಿವಾರ ಬಿಜೆಪಿ ನೇತೃತ್ವದ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದೆ.

ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ನೇತೃತ್ವದ ಮಣಿಪುರ ಸರಕಾರವು ರಾಜ್ಯದಲ್ಲಿ ಜನಾಂಗೀಯ ಸಂಘರ್ಷವನ್ನು ನಿಯಂತ್ರಿಸುವಲ್ಲಿ ಹಾಗೂ ಸಹಜ ಸ್ಥಿತಿಯನ್ನು ಮರುಸ್ಥಾಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ರವಾನಿಸಿರುವ ಪತ್ರದಲ್ಲಿ ನ್ಯಾಷನಲ್ ಪೀಪಲ್ಸ್ ಪಕ್ಷ ಆರೋಪಿಸಿದೆ.

ಬಿಕ್ಕಟ್ಟನ್ನು ನಿರ್ವಹಿಸಿದ ರೀತಿ ಹಾಗೂ ಮುಗ್ಧ ಜನರ ಜೀವ ನಷ್ಟದ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಷನಲ್ ಪೀಪಲ್ಸ್ ಪಕ್ಷ, ತಕ್ಷಣವೇ ಸರಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯಲಾಗಿದೆ ಎಂದು ಪ್ರಕಟಿಸಿದೆ.

“ಬಿರೇನ್ ಸಿಂಗ್ ನೇತೃತ್ವದ ಮಣಿಪುರದ ಸರಕಾರವು ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಹಾಗೂ ಸಹಜತೆಯನ್ನು ಮರುಸ್ಥಾಪಿಸುವಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದೆ ಎಂದು ನಮಗನ್ನಿಸುತ್ತಿದೆ” ಎಂದು ಜೆ.ಪಿ.ನಡ್ಡಾರಿಗೆ ರವಾನಿಸಿರುವ ಪತ್ರದಲ್ಲಿ ಎನ್ಪಿಪಿ ಅಸಮಾಧಾನ ವ್ಯಕ್ತಪಡಿಸಿದೆ.

“ಪ್ರಸಕ್ತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಮಣಿಪುರದಲ್ಲಿನ ಬಿರೇನ್ ಸಿಂಗ್ಗ ನೇತೃತ್ವದ ಸರಕಾರಕ್ಕೆ ನೀಡಿರುವ ಬೆಂಬಲವನ್ನು ತಕ್ಷಣದಿಂದಲೇ ಹಿಂಪಡೆಯಲು ಪಕ್ಷ ನಿರ್ಧರಿಸಿದೆ” ಎಂದೂ ಪತ್ರದಲ್ಲಿ ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News