Photo Credit : ndtv

ಹೊಸದಿಲ್ಲಿ, ನ. 22: ಪ್ಯಾಕೇಜ್‌ ಮಾಡಿದ ಕುಡಿಯುವ ನೀರಿನ ಮಾದರಿಯಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಬ್ರೋಮೇಟ್ ಹಾಗೂ ಕ್ಯಾನ್ಸರ್ ಕಾರಕವೆಂದು ವರ್ಗೀಕರಿಸಲಾದ ಪಾಲಿನ್ಯೂಕ್ಲಿಯರ್ ಆರೊಮ್ಯಾಟಿಕ್ ಹೈಡ್ರೋಕಾರ್ಬನ್ ಗಳು (PAHs) ಪತ್ತೆಯಾದ ಹಿನ್ನೆಲೆಯಲ್ಲಿ ಬಿಸ್ಲೆರಿ ಇಂಟರ್ನ್ಯಾಷನಲ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಅನುಮತಿ ನೀಡಿದೆ ಎಂದು NDTV ವರದಿ ಮಾಡಿದೆ.

ಬಿಸ್ಲೆರಿ ನೀರಿನ ಆರಂಭಿಕ ಪ್ರಯೋಗಾಲಯ ಪರೀಕ್ಷೆಯಲ್ಲಿ ಬ್ರೋಮೇಟ್ ಪ್ರಮಾಣ ನಿಗದಿತ ಮಿತಿಯನ್ನು ಮೀರಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ, 2006ರ ಅಡಿಯಲ್ಲಿ ಮಾದರಿಯನ್ನು ಅಸುರಕ್ಷಿತವೆಂದು ಘೋಷಿಸಲಾಗಿತ್ತು.

ಕಂಪೆನಿಯು ಮೇಲ್ಮನವಿ ಸಲ್ಲಿಸಿದ ಬಳಿಕ ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎರಡನೇ ಹಂತದ ಪರೀಕ್ಷೆಯಲ್ಲೂ ನೀರು ಅಸುರಕ್ಷಿತವೆಂದು ದೃಢಪಟ್ಟಿದ್ದು, ಅದರಲ್ಲಿ ಪಾಲಿನ್ಯೂಕ್ಲಿಯರ್ ಆರೊಮ್ಯಾಟಿಕ್ ಹೈಡ್ರೋಕಾರ್ಬನ್ ಗಳು (PAHs) ಪತ್ತೆಯಾಗಿವೆ.

ಬಿಸ್ಲೆರಿ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ನ ಘಟಕದಿಂದ ಬಾಟಲಿಗಳಲ್ಲಿ ತುಂಬಿಸಿದ ಕುಡಿಯುವ ನೀರಿನ ಮಾದರಿಯನ್ನು ಸಂಗ್ರಹಿಸಿ ಪರೀಕ್ಷಿಸಲಾಗಿತ್ತು. ಎರಡೂ ಪ್ರಯೋಗಾಲಯಗಳ ವರದಿಗಳು ನೀರು ಅಸುರಕ್ಷಿತ ಎಂದು ದೃಢಪಡಿಸಿವೆ ಎಂದು FSSAI ತಿಳಿಸಿದೆ. ಕಂಪೆನಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ

contributor

ಇರ್ಷಾದ್ ಎಂ. ವೇಣೂರು ಅವರು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದು, ಪತ್ರಿಕೋದ್ಯಮ ಕ್ಷೇತ್ರದಲ್ಲಿ 13 ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ‘ವಾರ್ತಾಭಾರತಿ’ಯಲ್ಲಿ ಡಿಜಿಟಲ್ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಡೆಕ್ಕನ್ ಹೆರಾಲ್ಡ್–ಪ್ರಜಾವಾಣಿ’ ಸಮೂಹದಲ್ಲಿ ಫೋಟೊ ಜರ್ನಲಿಸ್ಟ್ ಆಗಿಯೂ ಕೆಲಸ ಮಾಡಿದ್ದಾರೆ. ಅಂತರರಾಷ್ಟ್ರೀಯ ವಿದ್ಯಮಾನಗಳು, ಮಧ್ಯಪ್ರಾಚ್ಯದ ಸಂಘರ್ಷಗಳು, ಗಲ್ಫ್ ರಾಷ್ಟ್ರಗಳ ಬೆಳವಣಿಗೆಗಳು, ರಾಜಕೀಯ, ವಾಯುಯಾನ, ಅಪರಾಧ ಮತ್ತು ಕ್ರೀಡೆ ಅವರ ಆಸಕ್ತಿಯ ಸುದ್ದಿ ಕ್ಷೇತ್ರಗಳಾಗಿವೆ.