×
Ad

ದಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ; ಲೋಕಸಭಾ ಸದಸ್ಯ ಬಿಧುರಿಗೆ ಬಿಜೆಪಿ ಶೋಕಾಸ್ ನೋಟಿಸ್

ಚಂದ್ರಯಾನ ಮಿಷನ್‌ನ ಯಶಸ್ಸಿನ ಚರ್ಚೆಯ ವೇಳೆ ಸಂಸತ್ತಿನಲ್ಲಿ ಬಹುಜನ ಸಮಾಜ ಪಕ್ಷದ ಸಂಸದ ದಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಕ್ಕಾಗಿ ಬಿಜೆಪಿ ತನ್ನ ಲೋಕಸಭಾ ಸದಸ್ಯ ರಮೇಶ್ ಬಿಧುರಿ ಅವರಿಗೆ ಶುಕ್ರವಾರ ಶೋಕಾಸ್ ನೋಟಿಸ್ ನೀಡಿದೆ

Update: 2023-09-22 17:34 IST

Video Grab of Ramesh Bidhuri

ಹೊಸದಿಲ್ಲಿ: ಚಂದ್ರಯಾನ ಮಿಷನ್‌ನ ಯಶಸ್ಸಿನ ಚರ್ಚೆಯ ವೇಳೆ ಸಂಸತ್ತಿನಲ್ಲಿ ಬಹುಜನ ಸಮಾಜ ಪಕ್ಷದ ಸಂಸದ ದಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಕ್ಕಾಗಿ ಬಿಜೆಪಿ ತನ್ನ ಲೋಕಸಭಾ ಸದಸ್ಯ ರಮೇಶ್ ಬಿಧುರಿ ಅವರಿಗೆ ಶುಕ್ರವಾರ ಶೋಕಾಸ್ ನೋಟಿಸ್ ನೀಡಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಸಂಸದೀಯ ಪದಗಳನ್ನು ಬಳಸಿದ್ದಕ್ಕಾಗಿ ದಕ್ಷಿಣ ದೆಹಲಿ ಕ್ಷೇತ್ರದ ಸಂಸದರಿಂದ ಪಕ್ಷವು ಉತ್ತರವನ್ನು ಕೇಳಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಗುರುವಾರ ಲೋಕಸಭೆಯಲ್ಲಿ ಮಾತನಾಡಿದ ಬಿಧುರಿ, ಅಲಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದರು. ನಂತರ ಸ್ಪೀಕರ್ ಓಂ ಬಿರ್ಲಾ ಆ ಮಾತುಗಳನ್ನು ಕಡತದಿಂದ ತೆಗೆದು ಹಾಕಿದರು.

ಬಿಧುರಿ ಅವರ ಹೇಳಿಕೆಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಸಂಸದರ ಬಗ್ಗೆ ಅವರ ವಿವಾದಾತ್ಮಕ ಉಲ್ಲೇಖಗಳ ವೀಡಿಯೊ ವೈರಲ್ ಆಗಿದ್ದು, ಸದನದಿಂದ ಅಮಾನತು ಸೇರಿದಂತೆ ಅವರ ವಿರುದ್ಧ ಕಠಿಣ ಕ್ರಮಕ್ಕೆ ವಿರೋಧ ಪಕ್ಷಗಳು ಒತ್ತಾಯಿಸಿವೆ.

ಸ್ಪೀಕರ್ ಬಿರ್ಲಾ ಸಂಸದ ರಮೇಶ್ ಬಿಧುರಿಗೆ ಎಚ್ಚರಿಕೆ ನೀಡಿದ್ದು, ಇಂತಹ ಅಪರಾಧ ಮರುಕಳಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News