×
Ad

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭೇಟಿಯಾದ ಬಿಜೆಪಿ ನಾಯಕಿ ವಸುಂಧರಾ ರಾಜೆ: ಫೋಟೋ ವೈರಲ್

Update: 2023-09-23 10:24 IST

Photo: Twitter@NDTV

ಜೈಪುರ: ಕಳೆದ ರಾತ್ರಿ ಜೈಪುರದಲ್ಲಿ ರಾಜಸ್ಥಾನದ ಕಾನ್ಸ್ಟಿಟ್ಯೂಷನ್ ಕ್ಲಬ್ ಉದ್ಘಾಟನೆ ಬಳಿಕ ಬಿಜೆಪಿ ನಾಯಕಿ ವಸುಂಧರಾ ರಾಜೇ ಅವರು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು.

ಸಮಾರಂಭದ ಸಂದರ್ಭದಲ್ಲಿ ರಾಜೇ ಮುಖ್ಯಮಂತ್ರಿಯವರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲಿಲ್ಲ ಆದರೆ ಕಾರ್ಯಕ್ರಮದ ನಂತರ ಅವರನ್ನು ಪ್ರತ್ಯೇಕವಾಗಿ ಭೇಟಿಯಾದರು.

ಇಬ್ಬರು ನಾಯಕರು ಒಟ್ಟಿಗೆ ಇರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭೇಟಿಯ ರಾಜಕೀಯ ಪರಿಣಾಮಗಳ ಬಗ್ಗೆ ವದಂತಿಗೆ ಕಾರಣವಾಗಿದೆ.

ರಾಜೇ ಹಾಗೂ ಗೆಹ್ಲೋಟ್ ಇಬ್ಬರೇ ಇರುವ ಚಿತ್ರ ವೈರಲ್ ಆಗಿದೆ. ಆದರೆ ಈ ಸಂದರ್ಭದಲ್ಲಿ ರಾಜಸ್ಥಾನ ವಿಧಾನಸಭೆಯ ಸ್ಪೀಕರ್ ಡಾ ಸಿ.ಪಿ. ಜೋಶಿ ಹಾಗೂ ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್ ಅವರು ಸಹ ಹಾಜರಿದ್ದರು.

ಫೋಟೋ ವೈರಲ್ ಆದ ನಂತರ, ರಾಜೆ ಅವರ ಕಚೇರಿಯು ಮುಖ್ಯಮಂತ್ರಿ ಗೆಹ್ಲೋಟ್ ಅವರೊಂದಿಗೆ ಜೋಶಿ ಹಾಗೂ ರಾಥೋಡ್ ಅವರೊಂದಿಗಿನ ಮೂಲ ಚಿತ್ರವನ್ನು ಹಂಚಿಕೊಂಡಿದೆ

200 ಸ್ಥಾನಗಳ ರಾಜಸ್ಥಾನ ವಿಧಾನಸಭೆಗೆ ಈ ವರ್ಷದ ಕೊನೆಯಲ್ಲಿ ಚುನಾವಣೆಗಳು ನಡೆಯಲಿದ್ದು, ಬಿಜೆಪಿಯು ಕಾಂಗ್ರೆಸ್ನಿಂದ ಮತ್ತೆ ಅಧಿಕಾರವನ್ನು ಕಸಿದುಕೊಳ್ಳುವ ನಿರೀಕ್ಷೆಯಲ್ಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News