×
Ad

ಗಣೇಶ ಮೂರ್ತಿಯನ್ನಿರಿಸಿದ್ದ ಪೆಂಡಾಲ್ ನಲ್ಲಿ ಬೆಂಕಿ: ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅಪಾಯದಿಂದ ಪಾರು

Update: 2023-09-27 13:14 IST

Photo credit: ANI

ಪುಣೆ: ಮಂಗಳವಾರ ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಹಾರಾಷ್ಟ್ರ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಶೇಖರ್ ಭವಾಂಕುಲೆ ಅವರೊಂದಿಗೆ ಪ್ರಾರ್ಥನೆ ಸಲ್ಲಿಸುವಾಗ, ಗಣೇಶನ ಮೂರ್ತಿ ಇರಿಸಿದ್ದ ಪೆಂಡಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿದ್ದರಿಂದ ಪೆಂಡಾಲ್ ಗೆ ಬೆಂಕಿ ಹತ್ತಿಕೊಂಡಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಘಟನೆ ನಡೆಯುತ್ತಿದ್ದಂತೆಯೇ ಜೆ.ಪಿ.ನಡ್ಡಾ ಅವರಿಗೆ ರಕ್ಷಣೆ ನೀಡಲಾಯಿತು ಎಂದು ಹೇಳಿದ್ದಾರೆ. ಪುಣೆ ನಗರದ ಹೃದಯ ಭಾಗದಲ್ಲಿರುವ ಲೋಕಮಾನ್ಯ ನಗರ್ ಪ್ರದೇಶದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಪೆಂಡಾಲ್ ನ ಮೇಲ್ಭಾಗಕ್ಕೆ ಬೆಂಕಿ ಹತ್ತಿಕೊಂಡಿರುವುದು ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ.

ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಸುದ್ದಿ ತಿಳಿಯುತ್ತಿದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News