×
Ad

ಉತ್ತರಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ಮೂವರು ಮೃತ್ಯು

Update: 2025-04-26 19:03 IST

Photo | NDTV

ಲಕ್ನೋ : ಉತ್ತರಪ್ರದೇಶದ ಸಹರಾನ್‌ಪುರದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.

ನಿಹಾಲ್ ಖೇಡಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ 2 ಕಿ.ಮೀ ವ್ಯಾಪ್ತಿವರೆಗೂ ಶಬ್ಧ ಕೇಳಿಸಿದೆ. ಹಲವಾರು ಕಾರ್ಮಿಕರು ಸ್ಫೋಟದಲ್ಲಿ ಗಾಯಗೊಂಡಿದ್ದಾರೆ.

ʼಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ತೆರಳಿ ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಕಾರ್ಖಾನೆಯ ಮೂವರು ನಿರ್ವಾಹಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆʼ ಎಂದು ಸಹರಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ಬನ್ಸಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸ್ಫೋಟದ ವೇಳೆ ಕಾರ್ಮಿಕರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಹೆಚ್ಚಿನ ಹಾನಿ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಪ್ರದೇಶದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಗಳು ಕಾರ್ಯಚರಿಸುತ್ತಿದ್ದು, ಇದಕ್ಕೆ ಆಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News