×
Ad

ಕೆಂಪುಕೋಟೆ ಬಳಿ ಸ್ಫೋಟ : ಯುಎಪಿಎಯಡಿ ಪ್ರಕರಣ ದಾಖಲಿಸಿಕೊಂಡ ದಿಲ್ಲಿ ಪೊಲೀಸರು

Update: 2025-11-11 10:18 IST

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದಿಲ್ಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಕಾರು ಸ್ಫೋಟ ಪ್ರಕರಣದ ಕುರಿತು ದಿಲ್ಲಿ ಪೊಲೀಸರು ಯುಎಪಿಎ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಿಲ್ಲಿಯ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಸ್ಪೋಟದಲ್ಲಿ ಒಂಭತ್ತು ಮಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದರು. ಘಟನೆ ಬೆನ್ನಲ್ಲೆ ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ವಿಮಾನ ನಿಲ್ದಾಣ, ರೈಲು ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ), ಸ್ಫೋಟಕ ಕಾಯ್ದೆ ಮತ್ತು ಬಿಎನ್ಎಸ್‌ನ ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಸಂಭವಿಸಿದ ಸ್ಫೋಟದ ಬೆನ್ನಲ್ಲೆ ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಂಜಾಬ್‌ನಲ್ಲೂ ರೆಡ್ ಅಲರ್ಟ್ ಘೋಷಿಸಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News